ಶಿಕ್ಷಣ ಮತ್ತು ಸಂಶೋಧನೆ

ಶಿಕ್ಷಣ ಮತ್ತು ಸಂಶೋಧನೆ


ದಕ್ಷಿಣ ಕನ್ನಡದಲ್ಲಿ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವು ಸಮಾಜದ ಪ್ರತಿಯೊಂದು ವಿಭಾಗವನ್ನೂ ತಲುಪಿದೆ. ಮೆಡಿಸಿನ್, ಎಂಜಿನಿಯರಿಂಗ್, ಫಾರ್ಮಸಿ, ನರ್ಸಿಂಗ್, ಹೋಟೆಲ್ ಮತ್ತು ಅಡುಗೆ, ಕಾನೂನು ಮತ್ತು ನಿರ್ವಹಣೆಗಳಲ್ಲಿ ಶಿಕ್ಷಣ ನೀಡುವ ಸಂಸ್ಥೆಗಳು ಈ ಜಿಲ್ಲೆಯಲ್ಲಿದೆ.

ದಕ್ಷಿಣ ಕನ್ನಡವು ಭಾರತದ ಉನ್ನತ ತಂತ್ರಜ್ಞಾನ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK) ನ ನೆಲೆಯಾಗಿದೆ. ಕಾಲೇಜ್ ಆಫ್ ಫಿಶರೀಸ್, ಕಂಕಾನಾಡಿ ಬಳಿಯ ಎಕ್ಕೂರಿನಲ್ಲಿದೆ . ಮಂಗಳೂರು ವಿಶ್ವವಿದ್ಯಾಲಯವು ,ಮಂಗಳೂರು ಸಮೀಪದ ಕೋನಜೆಯ ಸಾರ್ವಜನಿಕ ವಿಶ್ವವಿದ್ಯಾನಿಲಯವಾಗಿದೆ. ಇದು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.ಜಿಲ್ಲೆಯು ಪುತ್ತೂರಿನಲ್ಲಿರುವ ಗೋಡಂಬಿ ಸಂಶೋಧನಾ ನಿರ್ದೇಶನಾಲಯದಂಥ ಸಂಶೋಧನಾ ಸಂಸ್ಥೆಗಳಿಗೆ ನೆಲೆಯಾಗಿದೆ. ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಬಂಟ್ವಾಳ ತಾಲ್ಲೂಕಿನ ವಿಟ್ಲದಲ್ಲಿದೆ.

ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜುಗಳು ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಎಂಜಿನಿಯರಿಂಗ್, ಕೆನರಾ ಎಂಜಿನಿಯರಿಂಗ್ ಕಾಲೇಜ್, ಪಿಎ ಕಾಲೇಜ್ ಆಫ್ ಇಂಜಿನಿಯರಿಂಗ್, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ , ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಕರಾವಳಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎ.ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಎಸ್.ಡಿ.ಎಮ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮತ್ತು ಪ್ರಸನ್ನಾ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ.ಜಿಲ್ಲೆಯ ವೈದ್ಯಕೀಯ ಕಾಲೇಜುಗಳು ಎ ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ, ಕಸ್ತೂರ್ಬಾ ಮೆಡಿಕಲ್ ಕಾಲೇಜು, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಸಂಶೋಧನಾ ಕೇಂದ್ರ, ಯೆನೆಪೋಯಾ ಮೆಡಿಕಲ್ ಕಾಲೇಜ್ & ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಕೆವಿಜಿ ಮೆಡಿಕಲ್ ಕಾಲೇಜ್ ಸೇರಿವೆ.

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು, ಎ.ಬಿ ಶೆಟ್ಟಿ ಸ್ಮಾರಕ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಯೆನೆಪೋಯಾ ಡೆಂಟಲ್ ಕಾಲೇಜ್ ಮತ್ತು ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಕೆಲವು ದಂತ ಕಾಲೇಜುಗಳಾಗಿವೆ.